ಗ್ಯಾಸ್ ಬೆಲೆ ಏರಿಕೆ ದೇಶದ ಜನತೆಯನ್ನು ಸಂಕಷ್ಟಕ್ಕೆ ದೂಡಲಿದೆ: JDS ವಾಗ್ದಾಳಿ

Prasthutha|

ಬೆಂಗಳೂರು: ಗ್ಯಾಸ್ ಬೆಲೆ ಏರಿಕೆಯ ಬಿಸಿ ಮತ್ತೆ ದೇಶದ ಜನತೆಯನ್ನು ಸಂಕಷ್ಟಕ್ಕೆ ದೂಡಲಿದೆ ಎಂದು ಜಾತ್ಯಾತೀತ ಜನತಾ ದಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

- Advertisement -

ಈ ಕುರಿತು ಸರಣಿ ಟ್ವೀಟ್ ಮಾಡಿರುವ JDS, ಬೆಲೆ ಏರಿಕೆಯ ಬಿಸಿ ಮತ್ತೆ ದೇಶದ ಜನತೆಯನ್ನು ಸಂಕಷ್ಟಕ್ಕೆ ದೂಡಲಿದೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಗೆ 50 ರೂಪಾಯಿ, ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಗೆ 350.50 ರೂಪಾಯಿಗೆ ಹೆಚ್ಚಳವಾಗಿರುವ ಆಘಾತಕಾರಿ ಸುದ್ದಿ ವರದಿಯಾಗಿದೆ. ದೇಶದ ಆರ್ಥಿಕತೆಗೆ ಕಷ್ಟದಲ್ಲಿರುವಾಗ, ಜನತೆಯ ಜೇಬಿಗೆ ಕತ್ತರಿ ಎಷ್ಟು ಸರಿ? ಎಂದು ಪ್ರಶ್ನಿಸಿದೆ.

ಈಗಾಗಲೇ ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಸಬ್ಸಿಡಿ ನಿಂತಿರುವುದರಿಂದ ಗ್ರಾಮೀಣ ಭಾಗದ ಬಹಳಷ್ಟು ಮಹಿಳೆಯರು ಗ್ಯಾಸ್ ಸಿಲಿಂಡರ್ ಕೊಳ್ಳದೆ, ಮತ್ತೆ ಸೌದೆ ಬಳಕೆಗೆ ಹಿಂದಿರುಗಿದ್ದಾರೆ. ಇದೆ ವೇಳೆ ಮತ್ತೆ ಗೃಹ ಬಳಕೆಯ ಸಿಲಿಂಡರ್ ಬೆಲೆ ಏಕಾಏಕಿ ಏರಿಸಿದರೆ ಹೇಗೆ? ಕೇಂದ್ರ ಬಿಜೆಪಿ ಸರ್ಕಾರ ಯಾರಿಗಾಗಿ ಕೆಲಸ ಮಾಡುತ್ತಿದೆ? ದೇಶದ ಜನರು ಹಣದುಬ್ಬರದಿಂದ ತತ್ತರಿಸುತ್ತಿದ್ದರೆ, ಪ್ರಧಾನಿ ಮೋದಿ ಮತ್ತವರ ಸಂಪುಟ ರಾಜ್ಯ ಚುನಾವಣೆಗಳಿಗಾಗಿ ಸುತ್ತುತ್ತಿದ್ದಾರೆ. ನಮ್ಮ ರಾಜ್ಯದ ಸರ್ಕಾರಕ್ಕಂತೂ ಮಾನ-ಮರ್ಯಾದೆ ಇಲ್ಲ. ತಮ್ಮದೇ ಪಕ್ಷವು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಕಾರಣ ಎಲ್ಲವನ್ನೂ ಸಮರ್ಥಿಸುವ ಲಜ್ಜೆಗೇಡಿತನಕ್ಕೆ ಇಳಿದಿದ್ದಾರೆ ಎಂದು ಕಿಡಿಕಾರಿದೆ.  

- Advertisement -

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ಇಷ್ಟು ದೊಡ್ಡದಾಗಿ ಏರಿಸಿದರೆ ನಾಳೆ ಹೊಟೇಲ್, ರೆಸ್ಟೋರೆಂಟ್ ಗಳ ಪರಿಸ್ಥಿತಿ ಏನಾಹಬಹುದು? ಇಲ್ಲೆಲ್ಲ ಕೆಲಸ ಮಾಡುವ ಲಕ್ಷಾಂತರ ಮಂದಿಯ ಉದ್ಯೋಗದ ಗತಿ ಏನು? ಆಹಾರದ ಬೆಲೆ ಆಕಾಶದೆತ್ತರಕ್ಕೆ ಏರಿದರೆ ಜನಸಾಮಾನ್ಯರ ಪಾಡೇನು? ಸುಳ್ಳುಗಳನ್ನೇ ಹೇಳುತ್ತಾ ಜನರ ಬದುಕು ನಿರ್ನಾಮ ಮಾಡಲಾಗುತ್ತಿದೆ ಜನತಾದಳ ಆರೋಪಿಸಿದೆ.

Join Whatsapp