ಶಿರಾಡಿ ಘಾಟ್ ನಲ್ಲಿ ಉರುಳಿ ಬಿದ್ದ ಅನಿಲ ಟ್ಯಾಂಕರ್: ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿ ಬಂದ್

Prasthutha|

ಹಾಸನ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಶಿರಾಡಿಘಾಟ್ ಬಳಿ ಬುಧವಾರ ಬೆಳಿಗ್ಗೆ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದ್ದು, ಎಲ್ ಪಿಜಿ ಸೋರಿಕೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ 75 ನ್ನು ಬಂದ್ ಮಾಡಲಾಗಿದ್ದು, ಬುಧವಾರ ಮಧ್ಯರಾತ್ರಿ 12 ಗಂಟೆಯವರೆಗೆ ವಾಹನಗಳ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -


ಬೆಂಗಳೂರು-ಹಾಸನ-ಮಂಗಳೂರು ಮತ್ತು ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಪೊಲೀಸರು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ.
ಸಕಲೇಶಪುರದಿಂದ ಮಂಗಳೂರಿಗೆ ತೆರಳುವ ವಾಹನಗಳು ಸಕಲೇಶಪುರ–ಹಾನಬಾಳು–ಮೂಡಿಗೆರೆ ಮಾರ್ಗವಾಗಿ ಮಂಗಳೂರಿಗೆ ಸಂಚರಿಸಬೇಕು.


ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಹಾಸನ–ಬೂವನಹಳ್ಳಿ ಕ್ರಾಸ್–ಬೇಲೂರು ಮೂಲಕ ಸಂಚರಿಸಬೇಕು.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ–ಸಂಪಾಜೆ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಆದೇಶದಲ್ಲಿ ತಿಳಿಸಿದ್ದಾರೆ.

- Advertisement -



Join Whatsapp