ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದ ಗೌರವ್ ವಲ್ಲಭ್ ಬಿಜೆಪಿ ಸೇರ್ಪಡೆ

Prasthutha|

ನವದೆಹಲಿ: ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದ ಗೌರವ್ ವಲ್ಲಭ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -


ಪಕ್ಷದ ನಾಯಕ ವಿನೋದ್ ತಾವ್ಡೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಅವರಿಗೆ ಪಕ್ಷದ ಸದಸ್ಯತ್ವವನ್ನು ನೀಡಿದರು. ಹಾಗೆಯೇ ಬಿಹಾರದ ಕಾಂಗ್ರೆಸ್ ನಾಯಕ ಅನಿಲ್ ಶರ್ಮಾ ಹಾಗೂ ಆರ್ಜೆಡಿ ನಾಯಕ ಉಪೇಂದ್ರ ಪ್ರಸಾದ್ ಕೂಡ ಬಿಜೆಪಿ ಸೇರಿದ್ದಾರೆ.

ಗೌರವ್ ವಲ್ಲಭ್ ಪಕ್ಷದ ಹಿರಿಯ ನಾಯಕ ಹಾಗೂ ವಕ್ತಾರ ಕೂಡ ಆಗಿದ್ದರು, ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿ ಹೊರಬಂದಿದ್ದರು.

Join Whatsapp