Home ಟಾಪ್ ಸುದ್ದಿಗಳು ಗೌರಿ ಲಂಕೇಶ್ ಹತ್ಯೆ: 11ನೇ ಆರೋಪಿ ಮೋಹನ್‌ಗೆ ಜಾಮೀನು

ಗೌರಿ ಲಂಕೇಶ್ ಹತ್ಯೆ: 11ನೇ ಆರೋಪಿ ಮೋಹನ್‌ಗೆ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ. ನ್ಯಾಯಾಂಗ ಬಂಧನ ದಲ್ಲಿರುವ ಮೋಹನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ಈ ಆದೇಶ ಮಾಡಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ
ಮೋಹನ್ ಎಂದು ಹೇಳಲಾಗುತ್ತಿದೆ.

2017ರ ಸೆ.5ರಂದು ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅವರಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಎಸ್‌ಐಟಿ 17 ಆರೋಪಿಗಳನ್ನು ಬಂಧಿಸಿ, 8,500 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 527 ಸಾಕ್ಷಿಗಳಿದ್ದಾರೆ. ಮೋಹನ್ 11ನೇ ಆರೋಪಿಯಾಗಿದ್ದು, ಕೊಲೆಗೆ ಸಂಚು ಆರೋಪ ಆತನ ಮೇಲಿದೆ.

Join Whatsapp
Exit mobile version