ಗೌರಿ ಲಂಕೇಶ್ ಹತ್ಯೆ ಪ್ರಕರಣ; ಜುಲೈ ನಲ್ಲಿ ನಿತ್ಯ ವಿಚಾರಣೆ

Prasthutha|

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಗಳ ವಿಚಾರಣೆ ಜುಲೈ 4ರಿಂದ 8ರವರೆಗೆ ಪ್ರತಿದಿನ  ನಡೆಯಲಿದೆ. ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ವಿಚಾರಣೆ ನಡೆಸಲಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಸಾಕ್ಷಿಯಾಗಿರುವ ಕವಿತಾ ಲಂಕೇಶ್ ಅವರ ಸಾಕ್ಷ್ಯವನ್ನು  ದಾಖಲಿಸಿಕೊಂಡ ಬಳಿಕ ನ್ಯಾಯಾಧೀಶ ಚಂದ್ರಶೇಖರ ಮೃತ್ಯುಂಜಯ ಜೋಶಿ ಈ ಬಗ್ಗೆ ಆದೇಶ ನೀಡಿದರು.

- Advertisement -

18 ಆರೋಪಿಗಳ ಪೈಕಿ 11 ಮಂದಿಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಗೈರು ಹಾಜರಾಗಿದ್ದಉಳಿದ ಏಳು ಮಂದಿಯೂ ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಬೋಲ್ಕರ್ ಮತ್ತು ಎಡಪಂಥೀಯ ಚಿಂತಕ ಗೋವಿಂದ ಪಾನ್ಸರೆ ಕೊಲೆ ಪ್ರಕರಣದಲ್ಲೂ ಆರೋಪಿಗಳಾಗಿದ್ದು ಇವರೆಲ್ಲರನ್ನೂ ಮುಂಬೈನ ಆರ್ಥರ್ ಜೈಲಿನಲ್ಲಿರಿಸಲಾಗಿದೆ.

ಮುಂದಿನ ವಿಚಾರಣೆಯನ್ನು ಜುಲೈ 4ಕ್ಕೆ ನಿಗದಿಪಡಿಸಲಾಗಿದ್ದು, ಹತ್ಯೆ ನಡೆದ ನಾಲ್ಕು ವರ್ಷಗಳ ನಂತರ ವಿಚಾರಣೆ ವೇಗ ಪಡೆದಂತಾಗಿದೆ.



Join Whatsapp