ಏಷ್ಯಾದ ಮೊದಲ , ವಿಶ್ವದ 3ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ..!

Prasthutha|

ನವದೆಹಲಿ: ಭಾರತದ ಬಿಲಿಯನೇರ್ ಗೌತಮ್ ಅದಾನಿ ಅವರು ಇತ್ತೀಚಿನ ಬ್ಲೂಮ್ ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

- Advertisement -

137 ಬಿಲಿಯನ್ ಡಾಲರ್ ನಿವ್ವಳ ಆಸ್ತಿ ಹೊಂದಿರುವ ಅದಾನಿ, ಲೂಯಿಸ್ ವಿಟಾನ್ ನ  ಅಧ್ಯಕ್ಷ ಮತ್ತು ಸಿಇಒ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ಬ್ಲೂಮ್ ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಅಗ್ರ 3 ರಲ್ಲಿ ಸ್ಥಾನ ಪಡೆದ ಏಷ್ಯಾದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

251 ಬಿಲಿಯನ್ ಡಾಲರ್ ನಿವ್ವಳ ಆಸ್ತಿ ಹೊಂದಿರುವ ಟೆಸ್ಲಾ ಸಿಇಒ ಎಲೋನ್ ಮಸ್ಕ್ ಮತ್ತು 153 ಬಿಲಿಯನ್ ಡಾಲರ್ ನಿವ್ವಳ ಆಸ್ತಿ ಹೊಂದಿರುವ ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಅವರನ್ನು ಅದಾನಿ ಹಿಂದಿಕ್ಕಿದ್ದಾರೆ.

- Advertisement -

ಅದಾನಿ ಕಳೆದ ತಿಂಗಳು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಹಿಂದಿಕ್ಕಿ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿದ್ದರು, ಅವರ ನಿವ್ವಳ ಮೌಲ್ಯವು 113 ಬಿಲಿಯನ್ ಡಾಲರ್ ಗೆ ಏರಿತ್ತು.

Join Whatsapp