ಅತ್ಯಾವಶ್ಯಕ ಔಷಧಿಗಳ ಅನಧಿಕೃತ ದಾಸ್ತಾನು | ಗೌತಮ್ ಗಂಭೀರ್ ಪ್ರತಿಷ್ಠಾನ ದೋಷಿ

Prasthutha|

ಹೊಸದಿಲ್ಲಿ : ಕೋವಿಡ್ -19 ಅತ್ಯಾವಶ್ಯಕ ಔಷಧಿಗಳನ್ನು ಅನಧಿಕೃತವಾಗಿ ಸಂಗ್ರಹಿಸಿದ ಮತ್ತು ವಿತರಿಸಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಗೌತಮ್ ಗಂಭೀರ್ ಅಧೀನದ ಗೌತಮ್ ಗಂಭೀರ್ ಪ್ರತಿಷ್ಠಾನವು ದೋಷಿ ಎಂದು ದೆಹಲಿ ಹೈಕೋರ್ಟ್ ಗೆ ದೆಹಲಿ ಸರ್ಕಾರದ ಔಷಧ ನಿಯಂತ್ರಕ ತಿಳಿಸಿದೆ.

- Advertisement -

ದೆಹಲಿ ಸರ್ಕಾರದ ಔಷಧ ನಿಯಂತ್ರಕವು ಪ್ರತಿಷ್ಠಾನ, ಔಷಧಿ ವಿತರಕರು ಮತ್ತು ಇದಕ್ಕೆ ಸಂಬಂಧಿಸಿದ ಇತರರ ವಿರುದ್ಧ ವಿಳಂಬ ಮಾಡದೆ ಕ್ರಮ ಕೈಗೊಳ್ಳಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ ಎಂದು ತಿಳಿದುಬಂದಿದೆ.

ಶಾಸಕ ಪ್ರವೀಣ್ ಕುಮಾರ್ ಅವರು ಕೂಡ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯಡಿ ಇದೇ ರೀತಿಯ ಅಪರಾಧಗಳಲ್ಲಿ ತಪ್ಪಿತಸ್ಥ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

- Advertisement -

  ಆರು ವಾರಗಳಲ್ಲಿ ಈ ಪ್ರಕರಣಗಳಲ್ಲಿ ಹೆಚ್ಚಿನ ಪ್ರಗತಿಯ ಸ್ಥಿತಿಗತಿ ವರದಿಗಳನ್ನು ಸಲ್ಲಿಸುವಂತೆ ನ್ಯಾಯಾಲಯವು ಔಷಧ ನಿಯಂತ್ರಕ ಪ್ರಾಧಿಕಾರಕ್ಕೆ ಸೂಚಿಸಿದೆ.

Join Whatsapp