ಕಾಂಗ್ರೆಸ್ ಅಧ್ಯಕ್ಷಗಿರಿ: ಚುನಾವಣಾ ಅಖಾಡದಿಂದ ಗೆಹ್ಲೋಟ್ ಔಟ್: ಖರ್ಗೆ, ವೇಣುಗೋಪಾಲ್, ದಿಗ್ವಿಜಯ್ ಎಂಟ್ರಿ

Prasthutha|

ನವದೆಹಲಿ: ರಾಜಸ್ಥಾನದಲ್ಲಿ ಭುಗಿಲೆದ್ದಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಮತ್ತು ಕಾಂಗ್ರೆಸ್ ಒಳಜಗಳ ಉತ್ತುಂಗಕ್ಕೇರಿದೆ. ಈ ಮಧ್ಯೆ ಅಶೋಕ್ ಗೆಹ್ಲೋಟ್ ಪಕ್ಷದ ನಾಯಕ ಚುನಾವಣಾ ಕಣದಿಂದ ಹೊರಗುಳಿದಿದ್ದು, ಪಕ್ಷದ ಹಿರಿಯ ನಾಯಕರಾದ ಕೆ.ಸಿ.ವೇಣುಗೋಪಾಲ್, ದಿಗ್ವಿಜಯ್ ಸಿಂಗ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ನ ಉನ್ನತ ನಾಯಕತ್ವಕ್ಕಾಗಿ ಸ್ಪರ್ಧಿಸುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

- Advertisement -

ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ. ಸೆಪ್ಟೆಂಬರ್ 30 ರೊಳಗೆ ಇತರ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಮುಕುಲ್ ವಾಸ್ನಿಕ್, ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್ ಸಿಂಗ್, ಕೆ.ಸಿ.ವೇಣುಗೋಪಾಲ್ ರೇಸ್ ನಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಗೆಹ್ಲೋಟ್ ನಡೆದುಕೊಂಡ ರೀತಿ ಪಕ್ಷದ ನಾಯಕತ್ವಕ್ಕೆ ಸರಿಯಾಗಿಲ್ಲ. ಅವರ ಬಗ್ಗೆ ತುಂಬಾ ಅಸಮಾಧಾನಗೊಂಡಿದ್ದಾರೆ ಎಂದು ಮತ್ತೊಬ್ಬ ನಾಯಕ ಹೇಳಿದರು.

ಗೆಹ್ಲೋಟ್ ಹೈಡ್ರಾಮಾ ನಿನ್ನೆಯಿಂದ ತಾರಕಕ್ಕೇರಿದ್ದು ಪಕ್ಷಕ್ಕೆ ಹೊಸ ಬಿಕ್ಕಟ್ಟನ್ನು ಹುಟ್ಟುಹಾಕಿದ್ದಾರೆ. ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಬಣಗಳ ನಡುವಿನ ತಿಕ್ಕಾಟಕ್ಕೆ ಮಧ್ಯಸ್ಥಿಕೆ ವಹಿಸಲು ಕಾಂಗ್ರೆಸ್ ಹೈಕಮಾಂಡ್ ಕಮಲ್ ನಾಥ್ ಅವರನ್ನು ನೇಮಿಸಿದೆ ಎಂದು ಮೂಲಗಳು ತಿಳಿಸಿವೆ. ಇದರ ಮದ್ಯೆಯೇ ಗೆಹ್ಲೋಟ್ ಪಕ್ಷದ ನಾಯಕತ್ವಕ್ಕಿರುವ ಚುನಾವಣಾ ಅಖಾಡದಿಂದ ಔಟಾಗಿದ್ದಾರೆ ಎಂದು ಖಚಿತ ಮೂಲಗಳು ತಿಳಿಸಿವೆ.

Join Whatsapp