February 24, 2021

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ| ನಾಲ್ವರ ಬಂಧನ

ಚಿಕ್ಕಬಳ್ಳಾಪುರ : ಜಿಲೆಟಿನ್ ಸ್ಪೋಟ ಪ್ರಕರಣದ ಸಂಬಂಧ ಒಟ್ಟು 7 ಜನರ ಪೈಕಿ ನಾಲ್ವರನ್ನು ಗುಡಿಬಂಡೆ ಠಾಣೆ ಪೂಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಸಿ ನಿನ್ನೆ ಚಾಲಕ ರಿಯಾಝ್ ನನ್ನು ಬಂಸಿದ್ದ ಪೂಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಪ್ರವೀಣ್, ರಾಘವೇಂದ್ರ ರೆಡ್ಡಿ, ಮಧುಸೂದನ್ ರೆಡ್ಡಿ ಎಂಬುವವರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಎಸ್‍ಪಿ ಮಿಥುನ್‍ಕುಮಾರ್ ತಿಳಿಸಿದ್ದಾರೆ.

ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದಷ್ಟು ಶೀಘ್ರ ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಕ್ರಷರ್ ಪಾಲುದಾರರಾದ ರಾಘವೇಂದ್ರರೆಡ್ಡಿ ಸಿಕ್ಕಿಬಿದ್ದಿದ್ದು, ಪರಾರಿಯಾಗಿರುವ ನಾಗರಾಜರೆಡ್ಡಿ ಮತ್ತು ಉಳಿದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಹುಣಸೋಡು ದುರಂತ ಸಂಭವಿಸಿದ ನಂತರ ಅಕ್ರಮವಾಗಿ ಜಿಲೆಟಿನ್ ಸಂಗ್ರಹಿಸಬಾರದು ಎಂದು ಎಚ್ಚರಿಕೆ ನೀಡಲಾಗಿತ್ತು. ಎರಡು ಬಾರಿ ಭ್ರಮರವಾಸಿನಿ ಕ್ರಷರ್‍ ಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಆದರೂ ಕ್ರಷರ್‍ನಲ್ಲಿ ಅಕ್ರಮವಾಗಿ ಜಿಲೆಟಿನ್ ಸಂಗ್ರಹಿಸಿಟ್ಟಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಇಡೀ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದೆ.

ಇದರ ಬೆನ್ನಲ್ಲೇ ನಾಲ್ವರು ಆರೋಪಿಗಳನ್ನು ಬಂಧಿಸಿ ಉಳಿದ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!