ದಿ. ಜನರಲ್ ಬಿಪಿನ್ ರಾವತ್ ಸಹೋದರ ವಿಜಯ್ ರಾವತ್ ಬಿಜೆಪಿ ಸೇರುವ ಸಾಧ್ಯತೆ !

Prasthutha: January 19, 2022

ನವದೆಹಲಿ: ದಿವಂಗತ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಕಿರಿಯ ಸಹೋದರ ಕರ್ನಲ್ ವಿಜಯ್ ರಾವತ್ ಅವರು ಉತ್ತರಾಖಂಡದಲ್ಲಿ ಮುಂಬರುವ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಕರ್ನಲ್ ವಿಜಯ್ ರಾವತ್ ಅವರು ಉತ್ತರಾಖಂಡ ಪುಷ್ಕರ್ ಸಿಂಗ್ ಧಾಮಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದು, ಕೆಲವೇ ದಿನಗಳಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಹೇಳಿದರು.

ಈ ಕುರಿತು ಮಾತನಾಡಿದ  ಕರ್ನಲ್ ವಿಜಯ್ ರಾವತ್ “ನಾನು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದೇನೆ. ಕೆಲವೇ ದಿನಗಳಲ್ಲಿ ನಾನು ಡೆಹ್ರಾಡೂನ್ ನಲ್ಲಿ ಅಧಿಕೃತವಾಗಿ ಬಿಜೆಪಿ ಸೇರುತ್ತೇನೆ” ಎಂದು ಹೇಳಿದ್ದಾರೆ.

ಕಳೆದ ವರ್ಷ ತಮಿಳುನಾಡಿನ ಕೂನೂರ್ ಬಳಿ ಸಂಭವಿಸಿದ ಅಪಘಾತದಲ್ಲಿ ದೇಶದ ಮೊದಲ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಮತ್ತು 14 ಸಶಸ್ತ್ರ ಪಡೆಗಳ ಸಿಬ್ಬಂದಿ ಮೃತಪಟ್ಟಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!