“ಬಿಲ್ಕೀಸ್ ಬಾನುಗೆ ನ್ಯಾಯ ದೊರಕಿಸಿಕೊಡಿ” ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Prasthutha|

►ರಾಜ್ಯದ 15 ನಗರಗಳಲ್ಲಿ ಏಕಕಾಲದಲ್ಲಿ ಧರಣಿ

- Advertisement -

ಬೆಂಗಳೂರು: ಬಿಲ್ಕೀಸ್ ಬಾನುಗೆ ನ್ಯಾಯ ದೊರಕಿಸಿಕೊಡಿ ಎಂದು ಆಗ್ರಹಿಸಿ ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.

ವಿವಿಧ ಸಾಮಾಜಿಕ ಮತ್ತು ನಾಗರಿಕ ಸಂಘಟನೆಗಳು, ಬಹುತ್ವ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಪಾಲ್ಗೊಂಡಿದ್ದರು.

- Advertisement -

ಇದೇ ವೇಳೆ ಏಕಕಾಲದಲ್ಲಿ ಬೆಳಗಾವಿ, ಧಾರವಾಡ, ಬೀದರ್, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕಲಬುರಗಿ, ಕೋಲಾರ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ಯಾದಗಿರಿ, ಮುಧೋಳದಲ್ಲಿಯೂ ಪ್ರತಿಭಟನೆಗಳು ನಡೆದವು.

ಅತ್ಯಂತ ಹೇಳವಾದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳನ್ನು ಮರಳಿ ಜೈಲಿಗೆ ಕಳುಹಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಿಕೊಂಡ ಮರುದಿನವೇ ಗುಜರಾತ್ ಸರ್ಕಾರ ಬಿಲ್ಕಿಸ್ ಬಾನು ಅವರ ಕುಟುಂಬದ 7 ಜನರನ್ನು ಹತ್ಯೆ ಮಾಡಿದ ಮತ್ತು ಅವಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ 11 ಮಂದಿ ಅಪರಾಧಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿರುವುದು ಅಕ್ಷಮ್ಯ ಅಪರಾಧ. ಮಾತ್ರವಲ್ಲ ವಿಶ್ವ ಹಿಂದೂ ಪರಿಷತ್ ಮುಖಂಡರು ಈ ಅಪರಾಧಿಗಳಿಗೆ ಆರತಿ ಎತ್ತಿ ಹೂಮಾಲೆ ಹಾಕಿ ಗೌರವದಿಂದ ಜೈಲಿನಿಂದ ಹೊರಗೆ ಬರಮಾಡಿಕೊಂಡಿರುವುದು ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಈ ಅಪರಾಧಿಗಳ ಬಿಡುಗಡೆಯನ್ನು ಮುಸ್ಲಿಮರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿ ಮಾಡುವ ಹಿಂದುತ್ವ ಯೋಜನೆಯ ಭಾಗವಾಗಿದೆ. ಇಂತಹ ಕೃತ್ಯಗಳ ವಿರುದ್ಧ ಸಮಾಜ ಧ್ವನಿ ಎತ್ತಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

Join Whatsapp