ಡಿಕೆಶಿ ಅವರೇ ಎರಡನೇ ಬಾರಿ ತಿಹಾರ್ ಜೈಲಿಗೆ ಹೋಗಲು ಸಿದ್ಧರಾಗಿ: ನಳಿನ್ ಕುಮಾರ್ ಕಟೀಲ್

Prasthutha|

ಮಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರೇ ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

- Advertisement -


ರಾಜ್ಯದಲ್ಲಿ ನಡೆಯುತ್ತಿರುವ ದಂಧೆ, ಲಂಚಾವತಾರದ ವಿರುದ್ಧ ಬಿಜೆಪಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಸರ್ಕಾರದ ಖಜಾನೆಯ ಹಣ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮನೆಗೆ ಹೋಗಿದೆ. ಖಜಾನೆ ಖಾಲಿ ಮಾಡಿದ ಲೂಟಿಕೋರ ಸರ್ಕಾರ ತೊಲಗಬೇಕು. ಡಿಕೆ ಶಿವಕುಮಾರ್ ಅವರೇ ನೀವು ತಿಹಾರ್ ಜೈಲಿಗೆ ಹೋಗಿ ಬಂದಿದ್ದೀರಿ. ಇದೀಗ ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗಿ ಎಂದು ಕಟೀಲ್ ಹೇಳಿದ್ದಾರೆ.