ನವದೆಹಲಿ: ಟ್ವಿಟ್ಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ಇಂದು ಸುಪ್ರೀಮ್ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಗಾಝಿಯಾಬಾದ್ ನಲ್ಲಿ ಮುಸ್ಲಿಮ್ ವ್ಯಕ್ತಿಗೆ ಜೈ ಶ್ರೀರಾಮ್ ಕೂಗಲು ಬಲವಂತಪಡಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಮ್ ಕೋರ್ಟ್ ನೋಟಿಸ್ ನೀಡಿದೆ.
ಗಾಝಿಯಾಬಾದ್ ನಲ್ಲಿ ಅಬ್ದುಲ್ ಸಮದ್ ಸೈಪಿ ಎಂಬಾತನ ಮೇಲೆ ಜೈ ಶ್ರೀರಾಮ್ ಕೂಗಲು ಬಲವಂತಪಡಿಸುತ್ತಿರುವ ದೃಶ್ಯಾವಳಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ವೈರಲ್ ಆಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ಷ್ಮ ವಿಚಾರದ ವೀಡಿಯೋವೊಂದನ್ನು ಪ್ರಸಾರಪಡಿಸಿದ ಕುರಿತು ಉತ್ತರಪ್ರದೇಶ ಸರ್ಕಾರ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿತ್ತು. ಉತ್ತರ ಪ್ರದೇಶದ ನಡೆಯನ್ನು ಪ್ರಶ್ನಿಸಿ ಮಹೇಶ್ವರಿ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪ್ರಕರಣ ವಜಾಗೊಳಿಸಿತ್ತು.
ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಉತ್ತರ ಪ್ರದೇಶದ ಸರ್ಕಾರದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಮ್ ಕೋರ್ಟ್ ಮನೀಶ್ ಮಹೇಶ್ವರಿ ಅವರಿಗೆ ನೋಟಿಸ್ ಜಾರಿ ಮಾಡಿದೆ.