370ನೇ ವಿಧಿ ರದ್ದತಿಯ ನಂತರ ಕಾಶ್ಮೀರದ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ: ಗುಲಾಂ ನಬಿ ಆಝಾದ್

Prasthutha|

ಶ್ರೀನಗರ: ಆರ್ಟಿಕಲ್ 370 ರ ಅಡಿಯಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮೊದಲು ರಾಜ್ಯದಲ್ಲಿ ಪರಿಸ್ಥಿತಿ ಅಷ್ಟೊಂದು ಕೆಟ್ಟದಾಗಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಗುಲಾಂ ನಬಿ ಆಝಾದ್ ಹೇಳಿದ್ದಾರೆ.

- Advertisement -

ಕೇಂದ್ರಾಡಳಿತ ಪ್ರದೇಶವಾದ ನಂತರ ರಾಜ್ಯವು ಎಲ್ಲ ಕ್ಷೇತ್ರಗಳಲ್ಲೂ ಹಿಂದುಳಿದಿದೆ ಎಂದು ಅವರು ಹೇಳಿದ್ದಾರೆ. ಆಗಸ್ಟ್ 2019 ರಲ್ಲಿ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸಿ ರಾಜ್ಯವನ್ನು ಎರಡು ಪ್ರದೇಶಗಳಾಗಿ ವಿಭಜಿಸಿತು.

ಅಮಿತ್ ಶಾ ಮೂರು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿ, 370 ನೇ ವಿಧಿಯು ತಾರತಮ್ಯವಾಗಿದೆ. ಅದನ್ನು ರದ್ದುಗೊಳಿಸುವುದರೊಂದಿಗೆ ಜಮ್ಮು ಮತ್ತು ಕಾಶ್ಮೀರವು ಹೊಸ ಯುಗವನ್ನು ಪ್ರವೇಶಿಸಿದೆ ಎಂದು ಹೇಳಿದ್ದರು.

- Advertisement -

“370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿಯಾಗಿ ಆಸ್ಪತ್ರೆಗಳು ನಿರ್ಮಾಣವಾಗಲಿದ್ದು, ನಿರುದ್ಯೋಗ ಕಡಿಮೆಯಾಗಲಿದೆ ಎಂದು ಸರ್ಕಾರ ಹೇಳಿತ್ತು. ಆದರೆ ಹಾಗಾಗಲಿಲ್ಲ. ವಿಶೇಷ ಸ್ಥಾನಮಾನ ರದ್ದತಿಯಿಂದ ಅಪಾರ ನಷ್ಟ ಉಂಟಾಗಿದೆ ಎಂದು ಆಝಾದ್ ಹೇಳಿದ್ದಾರೆ.

Join Whatsapp