ಬೆಂಗಳೂರು: ತನಗೆ ಉಡುಗೊರೆಯಾಗಿ ಸಿಕ್ಕ ಚಿನ್ನದ ಕತ್ತಿಯನ್ನು ಶ್ರೀರಾಮನಿಗೆ ಅರ್ಪಣೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಪ್ರಧಾನಿ ಆಗಿದ್ದಾಗ ನನಗೆ ಒಮಾನ್ ದೇಶದಲ್ಲಿ ಚಿನ್ನದ ಕತ್ತಿಯನ್ನು ಉಡುಗೋರೆಯಾಗಿ ನೀಡಲಾಗಿತ್ತು. ಅದನ್ನು ತೆರಿಗೆ ಕಟ್ಟಿ ಬೆಂಗಳೂರಿಗೆ ತರಿಸಿಕೊಂಡು ಶ್ರೀ ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿರುವ ಶ್ರೀರಾಮ ದೇವರಿಗೆ ಅರ್ಪಿಸಿದೆ. ಆ ಕತ್ತಿಯನ್ನು ನಾನೇ ಇಟ್ಟುಕೊಳ್ಳಬಹುದಿತ್ತು. ಆದರೆ, ದೈವಸೇವೆಯಲ್ಲಿ ನನ್ನ ನಂಬಿಕೆ ಎಂದು ಅವರು ಹೇಳಿದರು.