ಉತ್ತರ ಪ್ರದೇಶ: ಶಿಕ್ಷಕ, ಮ್ಯಾನೇಜರ್’ನಿಂದ ಅಪ್ರಾಪ್ತೆಯ ಅತ್ಯಾಚಾರ

Prasthutha|

ಮುಝಫರ್ ನಗರ: ಉತ್ತರ ಪ್ರದೇಶದ ಮುಝಫರ್ ನಗರದಲ್ಲಿ ಎಂಟರ ಹರೆಯದ ಅಪ್ರಾಪ್ತೆಯ ಬಾಲಕಿಯ ಮೇಲೆ ಶಾಲೆಯ ಶಿಕ್ಷಕ ಮತ್ತು ಮ್ಯಾನೇಜರ್ ಗುರುವಾರ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಘಟನೆಯ ಕುರಿತು ಬಾಲಕಿ ಘೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ನೀಡಿದ ದೂರಿನ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಕಲದೀಪ್ ಸಿಂಗ್ ತಿಳಿಸಿದ್ದಾರೆ.

- Advertisement -

ಸದ್ಯ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಕ್ಕೊಳಪಡಿಸಲಾಗಿದ್ದು, ಅತ್ಯಾಚಾರ ದೃಢಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Join Whatsapp