ಲಿಫ್ಟ್ ಗುಂಡಿಗೆ ಬಿದ್ದು ಬಾಲಕಿ ಮೃತ್ಯು

Prasthutha|

ಬೆಂಗಳೂರು: ಆಟವಾಡುವ ವೇಳೆ ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿರುವ ದಾರುಣ ಘಟನೆ ಕೆ.ಆರ್ ಮಾರ್ಕೆಟ್’ನ ಸುಲ್ತಾನ್ ಪೇಟೆ ಬಳಿ ನಿನ್ನೆ ತಡರಾತ್ರಿ ನಡೆದಿದೆ.

- Advertisement -


ಮಹೇಶ್ವರಿ (6) ಮೃತ ಬಾಲಕಿ ಎಂದು ತಿಳಿದುಬಂದಿದೆ.


ಮಹೇಶ್ವರಿಯ ಪೋಷಕರು ಕಟ್ಟಡ ಕಾಮಗಾರಿಗಾಗಿ ಬಂದಿದ್ದರು. ಐದು ಅಂತಸ್ತಿನ ಕಟ್ಟಡದ ಕಾಮಗಾರಿ ನಡೆಯುತ್ತಿದ್ದು, ಬಾಲಕಿ ಆಟವಾಡುತ್ತಾ ಲಿಫ್ಟ್ ನಿರ್ಮಾಣಕ್ಕೆ ತೋಡಲಾಗಿದ್ದ ಗುಂಡಿಗೆ ಬಿದ್ದಿದ್ದು ಕೆ.ಆರ್ ಮಾರ್ಕೆಟ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

- Advertisement -


ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ನ ಗುಂಡಿಯೊಳಗೆ ವಿನೋದ ಎಂಬ 2 ವರ್ಷದ ಮಗು ಬಿದ್ದು ಗಾಯಗೊಂಡಿತ್ತು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿತ್ತು.

Join Whatsapp
Exit mobile version