ಚಿರತೆ ದಾಳಿಯಿಂದ ಬಾಲಕಿ ಸಾವು: 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದ ಈಶ್ವರ ಖಂಡ್ರೆ

Prasthutha|

ಚಾಮರಾಜನಗರ: ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಇದೀಗ ಸಾವನ್ನಪ್ಪಿದ್ದಾಳೆ. ಸುಶೀಲ(6) ಮೃತ ಬಾಲಕಿ.

- Advertisement -

ಹನೂರು ತಾಲೂಕಿನ ಕಗ್ಗಲಿಗುಂದಿ ಸೋಲಿಗರ ಹಾಡಿಯಲ್ಲಿ ಬಾಲಕಿ ಮನೆಯಿಂದ ಹೊರಬಂದಿದ್ದ ವೇಳೆ ಚಿರತೆ ದಾಳಿ ಮಾಡಿ, ಎಳೆದೊಯ್ಯಲು ಯತ್ನಿಸಿತ್ತು. ಕೂಡಲೇ ಇದನ್ನ ನೋಡಿದ ಮನೆಯವರು ಕೂಗಿಕೊಳ್ಳುತ್ತಿದ್ದಂತೆ ಬಿಟ್ಟು ಓಡಿತ್ತು. ಬಳಿಕ ಆಕೆಯನ್ನ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಇದೀಗ ಗಂಭೀರ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ.


ಇನ್ನು ಮಂತ್ರಿ ಆದ ನಂತರ ಮೊದಲನೇ ಬಾರಿ ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಾತನಾಡಿ ‘ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕಿ ಸುಶೀಲಾ ಸಾವು ವಿಚಾರ ಕೇಳಿ ಬೇಸರ ಆಗಿದ್ದು, ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರ ನೀಡಲು ಸೂಚನೆ ನೀಡಿ, 4 ಸಾವಿರ ಮಾಸಾಶನ ಬರುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟು ಜಾರಿಗೊಳಿಸಲು ಪ್ರಯತ್ನ ಪಡುತ್ತೇನೆ ಎಂದರು.