ಹಾಸನ ಜಿಲ್ಲೆಯಲ್ಲಿ ಡೆಂಗ್ಯೂಗೆ ಬಾಲಕಿ ಬಲಿ: ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ

Prasthutha|

ಹಾಸನ: ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ಮತ್ತೊಬ್ಬಳು ಬಾಲಕಿಯೊಬ್ಬಳು ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ ಶಂಕಿತ ಶಂಕಿತ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

- Advertisement -

ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ಸಮೃದ್ಧಿ ಮೃತ ಬಾಲಕಿ.

ಮೂರು ದಿನಗಳ ಹಿಂದೆ ಬಾಲಕಿಯನ್ನು ಹಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೈಸೂರಿನ ಅಪೋಲೊ ಆಸ್ಪತ್ರೆಗೆ ಬಾಲಕಿಯನ್ನು ಸೇರಿಸಲಾಗಿತ್ತು. ಅಲ್ಲಿಯೂ ಬಾಲಕಿಗೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ.

- Advertisement -

ಕಳೆದ ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ನಾಲ್ವರು ಬಾಲಕಿಯರು ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯಲ್ಲಿ ಆತಂಕ ನಿರ್ಮಾಣ ಮಾಡಿದೆ. ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ನಿಗಾ ಇಡಲು ಸೂಚಿಸಲಾಗಿದೆ.



Join Whatsapp