ಜಾರ್ಖಂಡ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

Prasthutha|

ರಾಂಚಿ: ಜಾರ್ಖಂಡ್ ನ ರಾಂಚಿ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಏಳು ಮಂದಿಯ ದುಷ್ಕರ್ಮಿಗಳ ತಂಡ ಸಾಮೂಹಿಕ ಅತ್ಯಾಚಾರವೆಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರಿಸಲಾಗಿದೆಯೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಪರಿಚಯದ ಹಿನ್ನೆಲೆಯಲ್ಲಿ ಆರೋಪಿಗಳಲ್ಲಿ ಒಬ್ಬಾತ ತನ್ನ ಬೈಕ್ ನಲ್ಲಿ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದನು. ಈ ನಡುವೆ ಪೂರ್ವ ಯೋಜನೆಯಂತೆ ತನ್ನ 6 ಜನ ಸ್ನೇಹಿತರೊಂದಿಗೆ ಸೇರಿಕೊಂಡು ಬಾಲಕಿಯನ್ನು ಅತ್ಯಾಚಾರ ನಡೆಸಲಾಗಿದೆ ಎಂದು ಮಂದಾರ್ ಠಾಣೆಯ ಪೊಲೀಸ್ ಅಧಿಕಾರಿ ರಾಣಾ ಸಿಂಗ್ ತಿಳಿಸಿದ್ದಾರೆ.

ಘಟನೆಯ ನಂತರ ಪರಿಚಯದ ಆರೋಪಿಗಳ ಪೈಕಿ ಪರಿಚಯದವನು ಈ ಕೃತ್ಯವನ್ನು ಯಾರಲ್ಲಿಯೂ ಹೇಳದಂತೆ ಬೆದರಿಸಿ ಬಾಲಕಿಯನ್ನು ಮನೆಗೆ ತಂದು ಬಿಟ್ಟಿದ್ದಾನೆ. ಮನೆಗೆ ತಲುಪಿದ ಆಕೆ ಘಟನೆಯನ್ನು ತನ್ನ ಹೆತ್ತವರಿಗೆ ತಿಳಿಸಿ ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾಳೆ. ಪ್ರಕರಣದ ಎಲ್ಲಾ ಆರೋಪಿಗಳು ಮಂದಾರ್ ಪ್ರದೇಶದವರಾಗಿದ್ದು, ಅವರಲ್ಲಿ ನಾಲ್ವರನ್ನು ಬಂಧಿಸಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿ ಅವರನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -