ಬಾಲಕಿ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಮನವಿ

Prasthutha|

ಮಂಗಳೂರು : ಹನ್ನೊಂದು ವರ್ಷ ಪ್ರಾಯದ ಬಾಲಕಿಯೊಬ್ಬಳು ಕಾಣೆಯಾಗಿದ್ದು, ಆಕೆಯ ಪತ್ತೆಗೆ ಸಹಕರಿಸುವಂತೆ ಪೋಷಕರು ಮನವಿ ಮಾಡಿದ್ದಾರೆ.ಬಂದರು ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ರೋಳಿ ಹೈದರಾಲಿ ರಸ್ತೆಯ ನಿವಾಸಿ ಸಲಾಂ ಎಂಬವರ 11 ವರ್ಷ ಪ್ರಾಯದ ಪುತ್ರಿ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕಾಣೆಯಾಗಿದ್ದಾಳೆ.

- Advertisement -

ಅಲ್ಪ ಬುದ್ಧಿಮಾಂದ್ಯತೆ ಹೊಂದಿರುವ ಬಾಲಕಿಗೆ ಬೈಕ್, ರಿಕ್ಷಾಗಳೆಂದರೆ ಬಹಳ ಇಷ್ಟ. ಹಾಗಾಗಿ ಯಾವುದಾದರು ವಾಹನದಲ್ಲಿ ಹತ್ತಿ ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಪೋಷಕರು ಮತ್ತು ಸ್ಥಳೀಯರು ಎಲ್ಲೆಡೆ ಹುಡುಕಾಟ ನಡೆಸಿ, ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕುದ್ರೋಳಿಯ ಸಾಮಾಜಿಕ ಕಾರ್ಯಕರ್ತ ಹಾಜಿ ಶಂಶುದ್ದೀನ್ ಎಚ್ ಬಿಟಿ ನೇತೃತ್ವದಲ್ಲಿ ಸ್ಥಳೀಯ ಯುವಕರು ಬಂದರು, ಉರ್ವ ಮುಂತಾದೆಡೆ ಹುಡುಕಾಟ ನಡೆಸುತ್ತಿದ್ದಾರೆ.


ಮಗುವಿನ ಬಗ್ಗೆ ಮಾಹಿತಿ ಸಿಕ್ಕಿದರೆ 9845970355 ಸಂಖ್ಯೆಗೆ ಕರೆ ಮಾಡುವಂತೆ ಅಥವಾ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Join Whatsapp