Home ಟಾಪ್ ಸುದ್ದಿಗಳು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀ ಜಾಮೀನು ಅರ್ಜಿ ಸೆ.12ಕ್ಕೆ ಮುಂದೂಡಿಕೆ

ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀ ಜಾಮೀನು ಅರ್ಜಿ ಸೆ.12ಕ್ಕೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮೊದಲ ಆರೋಪಿ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರು ಜಾಮೀನು ಮನವಿ ಹಾಗೂ ಉಳಿದ ಮೂವರು ಆರೋಪಿಗಳ ನಿರೀಕ್ಷಣಾ ಜಾಮೀನು ಮನವಿಯ ವಿಚಾರಣೆಯನ್ನು ಚಿತ್ರದುರ್ಗದ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.

ಸಂತ್ರಸ್ತರ ಪರವಾಗಿ ವಕೀಲರಾದ ಶ್ರೀನಿವಾಸ್ ಮತ್ತು ಮುಕುಂದ್, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ನಾಗವೇಣಿ ಅವರು ಆಕ್ಷೇಪಣೆ ಸಲ್ಲಿಸಿದರು.

ವಾದ ಮಂಡಿಸಲು ವಿಶೇಷ ನ್ಯಾಯಾಧೀಶರಾದ ಬಿ ಕೆ ಕೋಮಲಾ ಅವರಿಂದ ಸರ್ಕಾರಿ ಅಭಿಯೋಜಕರಾದ ನಾಗವೇಣಿ ಕಾಲಾವಕಾಶ ಕೋರಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಸೆಪ್ಟೆಂಬರ್ 12ಕ್ಕೆ ದಿನಾಂಕ ನಿಗದಿಪಡಿಸಿ ವಿಚಾರಣೆ ಮುಂದೂಡಿದರು.

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಮುರುಘಾ ಶ್ರೀ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಆರೋಪದಲ್ಲಿ ಶ್ರೀಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

Join Whatsapp
Exit mobile version