ವಿದ್ಯಾರ್ಥಿನಿಯ ಹತ್ಯೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಹುಬ್ಬಳ್ಳಿಗೆ

Prasthutha|

ಹುಬ್ಬಳ್ಳಿ: ವಿದ್ಯಾರ್ಥಿನಿಯ ಹತ್ಯೆಯ ಕಾವನ್ನು ಬಿಜೆಪಿ ದಿನದಿಂದ ದಿನಕ್ಕೆ ಹೆಚ್ಚಿಸುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರವಿವಾರ ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ.

- Advertisement -

ಭಾನುವಾರ ಹುಬ್ಬಳ್ಳಿಗೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ವಿವಿಧ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಮೃತ ವಿದ್ಯಾರ್ಥಿನಿ ನೇಹಾ ಹೀರೇಮಠ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಮಧ್ಯಾಹ್ನ ಎರಡು ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿರುವ ನಡ್ಡಾ, 2 ರಿಂದ 10 ಗಂಟೆವರೆಗೂ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 3 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ ಹೋಟೆಲ್​​ನಲ್ಲಿ ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

Join Whatsapp