Home ಟಾಪ್ ಸುದ್ದಿಗಳು ಬುರ್ಖಾ ತೆಗೆಯುವಂತೆ ಕಾಲೇಜು ಆಡಳಿತ ಸೂಚನೆ: ವಿದ್ಯಾರ್ಥಿನಿಯರ ಪ್ರತಿಭಟನೆ

ಬುರ್ಖಾ ತೆಗೆಯುವಂತೆ ಕಾಲೇಜು ಆಡಳಿತ ಸೂಚನೆ: ವಿದ್ಯಾರ್ಥಿನಿಯರ ಪ್ರತಿಭಟನೆ

ಹೈದರಾಬಾದ್: ಪರೀಕ್ಷೆಗೆ ಹಾಜರಾಗುವ ಮುನ್ನ ಬುರ್ಖಾ ತೆಗೆಯುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಿ ಕಾಲೇಜು ಆಡಳಿತದ ವಿರುದ್ಧ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.


ಸಂತೋಷ್ ನಗರದಲ್ಲಿರುವ ಕೆ.ವಿ. ರಂಗ ರೆಡ್ಡಿ ಪದವಿ ಕಾಲೇಜಿನಲ್ಲಿ ಮಧ್ಯಂತರ ಪೂರಕ ಪರೀಕ್ಷೆ ವೇಳೆ ಈ ಪ್ರಕರಣ ವರದಿಯಾಗಿದೆ ಎಂದು ತಿಳಿದು ಬಂದಿದೆ.
ಕಡ್ಡಾಯವಾಗಿ ಬುರ್ಖಾ ತೆಗೆದು ಪರೀಕ್ಷೆಗೆ ಹಾಜರಾಗಬೇಕು ಎಂಬ ನಿಯಮ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇಲ್ಲ. ಆದರೆ, ಇಲ್ಲಿ (ಕೆ.ವಿ. ರಂಗ ರೆಡ್ಡಿ ಕಾಲೇಜಿನಲ್ಲಿ) ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ.


ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ತೆಲಂಗಾಣ ಗೃಹ ಸಚಿವ ಮುಹಮ್ಮದ್ ಅಲಿ, ಬುರ್ಖಾ ಹಾಕಿಕೊಳ್ಳಬಾರದು ಎಂದು ಎಲ್ಲಿಯೂ ಬರೆದಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಕೆಲವು ಮುಖ್ಯ ಶಿಕ್ಷಕರು ಅಥವಾ ಪ್ರಾಂಶುಪಾಲರು ಈ ರೀತಿ ಮಾಡುತ್ತಿದ್ದಾರೆ. ಆದರೆ, ಸಂಪೂರ್ಣವಾಗಿ ಜಾತ್ಯತೀತವಾಗಿರುವುದು ನಮ್ಮ ಧೋರಣೆ’ ಎಂದು ಹೇಳಿದ್ದಾರೆ.

Join Whatsapp
Exit mobile version