ಬಾಲಕಿ-ಯುವಕ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Prasthutha|

ಕೋಲಾರ: ಅಪ್ರಾಪ್ತ ವಯಸ್ಸಿನ ಬಾಲಕಿ ಮತ್ತು ಯುವಕ  ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಯಲವಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

- Advertisement -

ಗಂಗಾಧರ್ ಹಾಗೂ ಲಿಖಿತ ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp