ಕೋಲಾರ: ಅಪ್ರಾಪ್ತ ವಯಸ್ಸಿನ ಬಾಲಕಿ ಮತ್ತು ಯುವಕ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಯಲವಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಗಂಗಾಧರ್ ಹಾಗೂ ಲಿಖಿತ ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.