ಟ್ಯೂಷನ್ ಗೆ ಹೋದ ಬಾಲಕಿ ಶವವಾಗಿ ಸಂಪ್ ನಲ್ಲಿ ಪತ್ತೆ: ಶಿಕ್ಷಕ ವಶಕ್ಕೆ

Prasthutha|

ಮಂಡ್ಯ: ಟ್ಯೂಷನ್ ಗೆ ಹೋದ ಬಾಲಕಿ ನೀರಿನ ಸಂಪ್ ನಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.

- Advertisement -


ಮಳವಳ್ಳಿ ಪಟ್ಟಣದ ಎನ್ ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ದಂಪತಿಯ ಪುತ್ರಿ 10 ವರ್ಷದ ದಿವ್ಯಾ ಶವವಾಗಿ ಪತ್ತೆಯಾಗಿರುವ ಬಾಲಕಿ.
ಟ್ಯೂಷನ್ ಶಿಕ್ಷಕ ಕಾಂತರಾಜು (45) ಅವರ ಬಳಿ ನಿನ್ನೆ ಬೆಳಗ್ಗೆ 11ರ ವೇಳೆ ಮನೆಯಿಂದ ಹೋದವಳು ಮಧ್ಯಾಹ್ನ, ಸಂಜೆಯಾದರೂ ಮನೆಗೆ ಬಾರದಿದ್ದಾಗ ಪೋಷಕರು ಆತಂಕಗೊಂಡು ಟ್ಯೂಷನ್ ಸೆಂಟರ್ ಮತ್ತು ಅಕ್ಕಪಕ್ಕದಲ್ಲಿ ವಿಚಾರಿಸಿದ್ದಾರೆ, ಆದರೆ ಎಲ್ಲಿಯೂ ಪತ್ತೆಯಾಗಿರಲಿಲ್ಲ.


ಇದಾದ ನಂತರ ಸ್ಥಳೀಯರು ಬಾಲಕಿ ಹೊರಹೋಗಿರುವುದನ್ನು ಕಂಡು ನೀಡಿದ ಮಾಹಿತಿ ಮೇರೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ನೀರಿನ ಸಂಪ್ ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿಯ ಶವ ಪತ್ತೆಯಾಗಿದೆ.

- Advertisement -


ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಲಕಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಡಿವೈ ಎಸ್ಪಿ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಳದೊಂದಿಗೆ ಪರಿಶೀಲನೆ ನಡೆಸಿದ್ದಾರೆ. ಟ್ಯೂಷನ್ ಶಿಕ್ಷಕನನ್ನು ಮಳವಳ್ಳಿ ಪಟ್ಟಣ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.



Join Whatsapp