ಅರಿವು ಸಾಲ ಯೋಜನೆಯ ಯಥಾವತ್ ಜಾರಿಗೆ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಗ್ರಹ

Prasthutha: December 2, 2021

ಮಸ್ಕಿ: ಸರ್ಕಾರ ಅರಿವು ಸಾಲ ಯೋಜನೆಯನ್ನು ಈ ಹಿಂದಿನಂತೆ ಯಥಾಸ್ಥಿಯಲ್ಲಿ ಮುಂದುವರಿಸುವಂತೆ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ ಕರ್ನಾಟಕ ಮಸ್ಕಿ ಘಟಕದ ಸದಸ್ಯರು ಒತ್ತಾಯಿಸಿದರು. ಮಸ್ಕಿ ಪಟ್ಟಣದ ಬಸವೇಶ್ವರ ನಗರದಲ್ಲಿರುವ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ ಕರ್ನಾಟಕ ಮಸ್ಕಿ ಘಟಕದ ವತಿಯಿಂದ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಕವಿತಾ. ಆರ್ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.


ನಂತರ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ ಕರ್ನಾಟಕ ಮಸ್ಕಿ ಘಟಕದ ಅಧ್ಯಕ್ಷೆ ನಿಶಾತ್ ಅಕ್ರೂಜ್ ಮಾತನಾಡಿ, ಸರ್ಕಾರ ಅಲ್ಪ ಸಂಖ್ಯಾತರ ವಿದ್ಯರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಅನೂಕೂಲವಾಗಲೆಂದು ಈ ಹಿಂದೆ ಅರಿವು ಯೋಜನೆಯನ್ನು ಜಾರಿಗೆ ತಂದಿತ್ತು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಸಾಲ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತಿತ್ತು. ಆದರೆ ಇದೀಗ ಅದರ ವಿಧಾನವನ್ನು ಬದಲಿಸಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ತೊಂದರೆಯಾಗುತ್ತಿದೆ ಎಂದರು.


ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಈ ಯೋಜನೆ ಬಡತನ ರೇಖೆಗಿಂತ ಕೆಳಗಿರುವ ಮಕ್ಕಳ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೆರವಾಗಲಿದೆ. ಆದರೆ ಈಗ ರಾಜ್ಯದಲ್ಲಿ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸ ಮೊಟಕುಗೊಳಿಸುವ ಪರಿಸ್ಥಿತಿ ನಿರ್ಮಾಣ ವಾಗುತ್ತಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ವಿದ್ಯಾಭ್ಯಾಸ ಸಿಗುವುದು ಅಪರೂಪ. ಆದರೆ ಇಂಥ ಸಂದರ್ಭದಲ್ಲಿ ಸರ್ಕಾರ ಅರಿವು ಸಾಲ ಯೋಜನೆಯನ್ನು ಬದಲಾವಣೆ ಮಾಡಿದ್ದರಿಂದ ಬಡ ವಿದ್ಯಾರ್ಥಿಗಳ ವ್ಯಾಸಂಗ ಸರ್ಕಾರವೇ ನಿಲ್ಲಿಸಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.


ಆದ್ದರಿಂದ ಸರ್ಕಾರ ಕೂಡಲೇ ಅರಿವು ಸಾಲ ಯೋಜನೆಯನ್ನು ಮೊದಲಿನಂತೆ ಮರುಸ್ಥಾಪಿಸಿ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಹಾಜರುನ್ನೀಸ್, ಸುಮಯ್ಯ, ತಂಕಿನ್, ನಿಶಾತ್ ನಾಜೀನ್, ಅಬ್ದುಲ್ ಗನಿಸಾಬ್,ಬಾಹರಲಿಸಾಬ್ ಸೇರಿದಂತೆ ಇನ್ನಿತರರಿದ್ದರು.
ವರದಿ: ಎಸ್. ನಜೀರ್ ಮಸ್ಕಿ

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!