ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಡಿ.ಕೆ. ಶಿವಕುಮಾರ್

Prasthutha|

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಘಟನೆಯನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ ತಪ್ಪಿತ್ತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

- Advertisement -

ಪುಟ್ಟ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಅಮಾನವೀಯತೆಗೆ ಹಿಡಿದ ಕೈಗನ್ನಡಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬಾಲಕಿ ಕುಟುಂಬದವರಿಗೆ ನನ್ನ ಸಂತಾಪಗಳು. ಹೆಣ್ಣು ಮಕ್ಕಳಿಗೆ ನಮ್ಮ ರಾಜ್ಯದಲ್ಲಿ ಸುರಕ್ಷತೆಯಿಲ್ಲ ಎಂಬುದು ವಿಷಾದನೀಯ. ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಅಪರಾಧಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಪೊಲೀಸರು ಯಾವುದೇ ಒತ್ತಡಕ್ಕೆ ಈಡಾಗದೆ, ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.

Join Whatsapp