ಉಡುಪಿ: ಇಂದು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು, ತರಗತಿಯೊಳಗೆ ಹಿಜಾಬ್ ಧರಿಸಲು ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು ಬಿಡದ ಕಾರಣ ವಿದ್ಯಾರ್ಥಿನಿಯರು ಮನೆಗೆ ವಾಪಸ್ ತೆರಳಿದ್ದಾರೆ.
ಉಡುಪಿಯ ಹಿಜಾಬ್ ಅವಕಾಶ ನಿರಾಕರಿಸಲ್ಪಟ್ಟು ಹೈಕೋರ್ಟ್ ಮೊರೆ ಹೋದ ಆರು ಮಂದಿ ವಿದ್ಯಾರ್ಥಿನಿಯರು, ಶಿವಮೊಗ್ಗದಲ್ಲಿ ಕಮಲಾ ನೆಹರೂ ಕಾಲೇಜಿನಲ್ಲಿ 15 ವಿದ್ಯಾರ್ಥಿನಿಯರು ಇಂದು ಬೆಳಗ್ಗೆ ಎಂದಿನಂತೆ ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಹೋಗಿದ್ದರು. ಈ ವೇಳೆ ಪ್ರಾಂಶುಪಾಲರು, ಉಪನ್ಯಾಸಕರು ತರಗತಿಯೊಳಗೆ ಹಿಜಾಬ್ ಧರಿಸಲು ಬಿಡದ ಕಾರಣ ವಿದ್ಯಾರ್ಥಿನಿಯರು ವಾಪಸ್ ತೆರಳಿದ್ದಾರೆ.
ಇನ್ನು ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಐಶಾ ಶೀಫತ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು ತುರ್ತು ವಿಚಾರಣೆ ನಡೆಸಬೇಕೆಂದು ಕೋರಿದ್ದಾರೆ.