ಬೆಂಗಳೂರು ದಕ್ಷಿಣ ಟಿಕೆಟ್ ನನಗೆ ಕೊಡಿ: ಸೋಮಣ್ಣ

Prasthutha|

ಬೆಂಗಳೂರು: ನಾನು ಈ ಬಾರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿ ನಾಯಕ ವಿ. ಸೋಮಣ್ಣ ಹೇಳಿದ್ದಾರೆ.

- Advertisement -

ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಅವರು ಬಹಳ ಭಾವುಕರಾಗಿ ಮಾತನಾಡಿದ್ದಾರೆ.


ಕಳೆದ 20 ವರ್ಷಗಳಿಂದ ಬೆಂಗಳೂರು ದಕ್ಷಿಣದಲ್ಲಿ ಒಂದೇ ಸಮುದಾಯಕ್ಕೆ ಟಿಕೆಟ್ ನೀಡಲಾಗುತ್ತಿದ್ದು, ಈ ಬಾರಿ ಬೇರೆಯವರಿಗೆ ಕೊಡಲಿ. ನಾನು ಕೂಡ ಆಕಾಂಕ್ಷಿ ಎಂದು ಹೇಳಿದ್ದಾರೆ. ಈ ಮೂಲಕ ತೇಜಸ್ವಿ ಸೂರ್ಯ ಕ್ಷೇತ್ರದ ಟಿಕೆಟ್ ಈ ತಮಗೆ ಬೇಕೆಂದು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಯಾರು ಸೋಲಿಗೆ ಕಾರಣರಾದವರಿಗೆ ಶಿಕ್ಷೆ ಆಗಲೇ ಬೇಕು ಎಂದಿದ್ದಾರೆ.