Home ಟಾಪ್ ಸುದ್ದಿಗಳು ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿ: ವಿ. ಸೋಮಣ್ಣ ಪತ್ರ

ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿ: ವಿ. ಸೋಮಣ್ಣ ಪತ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದ್ದು, ನನಗೆ ಅವಕಾಶ ಕೊಟ್ಟು ನೋಡಿ ಎಂದು ಮಾಜಿ ಸಚಿವ ವಿ ಸೋಮಣ್ಣ ಬಿಜೆಪಿ ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನ ಕೇಳಿದ್ದು ನಿಜ. ನಾನು ಕೂಡ ಪಕ್ಷವನ್ನು ತುಂಬಾ ಹತ್ತಿರದಿಂದ ಬಲ್ಲವನಾಗಿದ್ದೇನೆ. ನನಗೆ ನನ್ನದೇ ಆದಂತ 45 ವರ್ಷದ ಅನುಭವವಿದೆ. ಬಿಜೆಪಿ ಕೊಟ್ಟ ಅನೇಕ ಟಾಸ್ಕ್ ಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಕೆಟ್ಟ ಪರಿಸ್ಥಿತಿಯಲ್ಲಿ ಒಂದು ಅವಕಾಶ ಕೊಡಿ ಅಂತಾ ಕೇಳಿದ್ದೇನೆ. ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗಲು ಅವಕಾಶ ಕೇಳಿದ್ದೇನೆ ಎಂದರು.


ನಾನು ಅವಕಾಶ ಕೇಳಿದ್ದು ಕೇವಲ 100 ದಿನ ಮಾತ್ರ. ಒಬ್ಬ ರಾಜ್ಯಾಧ್ಯಕ್ಷ ಯಾವ ರೀತಿ ಸಂಚಲನವನ್ನು ಮೂಡಿಸಬೇಕು ಎಂದು ತೋರಿಸುತ್ತೇನೆ ಎಂದರು.

Join Whatsapp
Exit mobile version