ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 40 ಮಂದಿಗೆ ಟಿಕೆಟ್ ನೀಡಿ: ಕುರುಬರ ಸಂಘ ಆಗ್ರಹ

Prasthutha|

ಬೆಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕುರುಬ ಸಮುದಾಯಕ್ಕೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಕನಿಷ್ಠ 40 ಕ್ಷೇತ್ರಗಳಲ್ಲಿ ಟಿಕೇಟ್ ನೀಡುವಂತೆ ಪ್ರದೇಶ ಕುರುಬರ ಸಂಘ ಆಗ್ರಹಿಸಿದೆ.

- Advertisement -


ಬೆಂಗಳೂರಿನಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ, ರಾಜ್ಯದಲ್ಲಿ ಪ್ರಬಲ ಜಾತಿಗಳ ಪೈಕಿ ಮೂರನೇ ಸ್ಥಾನದಲ್ಲಿರುವ ಕುರುಬ ಸಮುದಾಯ ಸುಮಾರು 70 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ್ದು. 150ಕ್ಕೂ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಈ ಸಮುದಾಯದ ಮತದಾರರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಆದ್ದರಿಂದ ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಸಮಾಜದ ಕನಿಷ್ಠ 40 ಆಕಾಂಕ್ಷಿಗಳನ್ನು ಗುರುತಿಸಿ ಗೆಲ್ಲುವ ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು ಎಂದು ತಿಳಿಸಿದರು.


2008ರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿ ಒಟ್ಟು ಆರು ಮಂದಿ ಶಾಸಕರಾಗಿದ್ದರು. 2013ರಲ್ಲಿ 14ಮಂದಿ ಶಾಸಕರಾಗಿ ಆಯ್ಕೆಯಾಗಿದ್ದರು. 2018ರಲ್ಲಿ 12ಮಂದಿ ಆಯ್ಕೆಯಾಗಿದ್ದರು. 2018ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 20 ಮಂದಿ, ಜೆಡಿಎಸ್ ಪಕ್ಷದಿಂದ 11 ಮಂದಿ, ಬಿಜೆಪಿ ಪಕ್ಷದಿಂದ ಐದು ಮಂದಿಗೆ ಟಿಕೇಟ್ ನೀಡಿದ್ದು ಅದರಲ್ಲೂ ಕುರುಬರಿಗೆ ಅನ್ಯಾಯ ಮಾಡಲಾಗಿದೆ ಎಂದರು.

- Advertisement -


2016ರ ಜಾತಿ ಜನಗಣತಿ ಆಧಾರದ ಮೇಲೆ ಕುರುಬರ ಸಂಖ್ಯೆ ಹೆಚ್ಚಿದ್ದು. ಇದರ ಆಧಾರದ ಮೇಲೆ 40 ಮಂದಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

Join Whatsapp