ಉತ್ತರಾಖಂಡ ಹಿಮಪಾತ | ಸುರಂಗದೊಳಗೆ ಸಿಲುಕಿದ್ದ 12 ಮಂದಿಯ ರಕ್ಷಣೆ

Prasthutha|

ರಾಂಚಿ : ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಷಿಮಠದ ತಪೋವನ್ ಪ್ರದೇಶದಲ್ಲಿ ಹಿಮಪಾತ ಸಂಭವಿಸಿದ ಹಿನ್ನೆಲೆಯಲ್ಲಿ, ಸುಮಾರು 152 ಮಂದಿ ಕಾಣೆಯಾಗಿದ್ದಾರೆ ಎನ್ನಲಾಗುತ್ತಿದೆ. ಕಾಣೆಯಾದವರಲ್ಲಿ 12 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ 100ಕ್ಕೂ ಅಧಿಕ ಜನರು ಸಾವಿಗೀಡಾಗಿರುವ ಸಾಧ್ಯತೆಯಿದೆ. ಆದರೆ, 14 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.

- Advertisement -

ಆದಾಗ್ಯೂ ಹಿಮನದಿ ಸ್ಫೋಟಕ್ಕೆ ಕಾರಣ ಏನು ಎಂಬುದು ಇನ್ನೂ ಪತ್ತೆಯಾಗಿಲ್ಲ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಜನರ ಜೀವ ಉಳಿಸುವ ಕಾರ್ಯಗಳಿಗೆ ಆದ್ಯತೆ ನೀಡಲಾಗಿದೆ ಎಂದು ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.

ನಾಪತ್ತೆಯಾಗಿರುವ ಶೋಧ ನಡೆಸುವುದಕ್ಕೆ ಶ್ವಾನದಳವನ್ನು ನಿಯೋಜಿಸಲಾಗಿದೆ. ಚಮೋಲಿಯ ತಪೋವನ ಅಣೆಕಟ್ಟು ಬಳಿ ಶ್ವಾನ ದಳದ ಸಹಾಯದೊಂದಿಗೆ ಶೋಧ ಕಾರ್ಯ ನಡೆಯುತ್ತಿದೆ. ಭದ್ರತಾ ಸಿಬ್ಬಂದಿ ಕೂಡ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

- Advertisement -

ತಪೋವನ ಬಳಿ ಸಣ್ಣ ಸುರಂಗದಿಂದ 12 ಜನರನ್ನು ರಕ್ಷಿಸಲಾಗಿದೆ. ದೊಡ್ಡ ಸುರಂಗವನ್ನು ತೆರೆಯಲಾಗುತ್ತಿದ್ದು, ಅದರ ಮೇಲಿರುವ ಬಂಡೆಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.  



Join Whatsapp