ನವದೆಹಲಿ: ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಸ್ಥಳದಲ್ಲಿ ಈ ಹಿಂದೆ ಇದ್ದ ದೇವಾಲಯದ ಜೀರ್ಣೋದ್ಧಾರಕ್ಕೆ ಕೋರಿ ಹಿಂದೂ ಸಮುದಾಯದ ಕಡೆಯವರು ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಗೆ ತಡೆ ಕೋರಿ ಅಂಜುಮನ್ ಇಂತೆಜಾಮಿಯಾ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು,ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ.
ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ಮುಖ್ಯ ಪ್ರಕರಣದೊಂದಿಗೆ ಈ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.