ಬಿಜೆಪಿ ಕಚೇರಿಯಲ್ಲಿ ರವಿವಾರ ಪರಿಶಿಷ್ಟ ಪಂಗಡ ಗಳ ಮುನ್ನಡೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಮಾಜಿ ಸಚಿವ ಆರಗ ಜ್ಞಾನೇಂದ್ರ, ಚುನಾವಣ ಉಸ್ತುವಾರಿ ಭಾನುಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ ಮತ್ತಿತರ ನಾಯಕರು ಭಾಗವಹಿಸಿದ್ದರು.
ಸಭೆಯ ಮೊದಲು ಸಿ.ಟಿ.ರವಿ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು, ವರಿಷ್ಠರು ಮಾತು ಆರಂಭಿಸುತ್ತಿದ್ದಂತೆ ದಿಢೀರ್ ಆಗಿ “ಗೋ ಬ್ಯಾಕ್ ಶೋಭಾ’ ಘೋಷಣೆ ಕೂಗಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು. ಮಾಜಿ ಶಾಸಕ ಸಿ.ಟಿ.ರವಿ ಅವರಿಗೆ ಈ ಬಾರಿಯ ಲೋಕಸಭೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.
ಚಿಕ್ಮಮಗಳೂರು: ಕಾಫಿನಾಡಿನಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಇದುವರೆಗೆ ತೆರೆಮರೆಯಲ್ಲಿ ನಡೆಯುತ್ತಿದ್ದ “ಗೋ ಬ್ಯಾಕ್’ ಅಭಿಯಾನ ರವಿವಾರ ಪಕ್ಷದ ಕಚೇರಿಯಲ್ಲಿ ವರಿಷ್ಠರ ಸಮ್ಮುಖದಲ್ಲೇ ಸ್ಫೋಟಗೊಂಡಿದೆ. ಇದಕ್ಕೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ “ಐ ಡೋಂಟ್ ಕೇರ್” ಎಂದು ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ರವಿವಾರ ಪರಿಶಿಷ್ಟ ಪಂಗಡ ಗಳ ಮುನ್ನಡೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಮಾಜಿ ಸಚಿವ ಆರಗ ಜ್ಞಾನೇಂದ್ರ, ಚುನಾವಣ ಉಸ್ತುವಾರಿ ಭಾನುಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ ಮತ್ತಿತರ ನಾಯಕರು ಭಾಗವಹಿಸಿದ್ದರು.
ಸಭೆಯ ಮೊದಲು ಸಿ.ಟಿ.ರವಿ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು, ವರಿಷ್ಠರು ಮಾತು ಆರಂಭಿಸುತ್ತಿದ್ದಂತೆ ದಿಢೀರ್ ಆಗಿ ಗೋ ಬ್ಯಾಕ್ ಶೋಭಾ’ ಘೋಷಣೆ ಕೂಗಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು. ಮಾಜಿ ಶಾಸಕ ಸಿ.ಟಿ.ರವಿ ಅವರಿಗೆ ಈ ಬಾರಿಯ ಲೋಕಸಭೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.
ಇದೆಲ್ಲ ವ್ಯವಸ್ಥಿತ. ನಾನು ಕೇರ್ ಮಾಡಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ