ಗೋವಾ ಚುನಾವಣೆ| ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ ಉಪಮುಖ್ಯಮಂತ್ರಿ ಪತ್ನಿ!

Prasthutha|

ಪಣಜಿ: ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಗೋವಾ ಉಪಮುಖ್ಯಮಂತ್ರಿ ಚಂದ್ರಕಾಂತ್ ಕಾವ್ಲೇಕರ್ ಅವರ ಪತ್ನಿ ಸಾವಿತ್ರಿ ಕಾವ್ಲೇಕರ್ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

- Advertisement -

ಟಿಕೆಟ್ ನೀಡದ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು ರಾಜ್ಯ ಬಿಜೆಪಿಯ ಮಹಿಳಾ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಗೋವಾದ ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಕೂಡ ಬಿಜೆಪಿಗೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧಿಸುವ ಚಿಂತನೆ ನಡೆಸಿದ ಬೆನ್ನಲ್ಲೇ ಸಾವಿತ್ರಿ ಕಾವ್ಲೇಕರ್ ನಿರ್ಧಾರ ಪಕ್ಷದ ನಾಯಕರಿಗೆ ತೀವ್ರ ತಲೆನೋವಾಗಿದೆ.

- Advertisement -

40 ವಿಧಾನಸಭಾ ಕ್ಷೇತ್ರಗಳಲ್ಲಿ 34 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಪ್ರಕಟಿಸಿತ್ತು.
ಗೋವಾದಲ್ಲಿ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

Join Whatsapp