ಕೋವಿಡ್ ವ್ಯಾಕ್ಸಿನ್ ಪಡೆಯದ ಪ್ರವಾಸಿಗರಿಗೆ ಗೋವಾ ಪ್ರವೇಶ ನಿಷೇಧ

Prasthutha|

ಪಣಜಿ: ಕೋವಿಡ್ ವ್ಯಾಕ್ಸಿನ್ ಪಡೆಯದ ಪ್ರವಾಸಿಗಳಿಗೆ ಗೋವಾಕ್ಕೆ ಬರಲು ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

- Advertisement -

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜುಲೈ 30ರೊಳಗೆ ಎಲ್ಲರಿಗೂ ಕೋವಿಡ್ ವ್ಯಾಕ್ಸಿನ್ ಮೊದಲ ಡೋಸ್ ನೀಡುವ ಗುರಿಯನ್ನು ಗೋವಾ ಸರ್ಕಾರ ಹೊಂದಿದೆ. ಮೊದಲ ಡೋಸ್ ವ್ಯಾಕ್ಸಿನೇಷನ್‍ನನ್ನು ರಾಜ್ಯದಲ್ಲಿ ಪೂರ್ಣಗೊಳಿಸುವವರೆಗೆ ಪ್ರವಾಸೋದ್ಯಮವನ್ನು ಆರಂಭಿಸುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದ್ದಾರೆ.

ಕೋವಿಡ್ ವ್ಯಾಕ್ಸಿನ್ ಪಡೆಯದ ಪ್ರವಾಸಿಗರಿಗೆ ಗೋವಾಕ್ಕೆ ಬರಲು ಅವಕಾಶ ನೀಡುವುದಿಲ್ಲ ರಾಜ್ಯದಲ್ಲಿರುವ ಎಲ್ಲರಿಗೂ ಕೋವಿಡ್ ಲಸಿಕೆಯನ್ನು ನೀಡದೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡುವುದಿಲ್ಲ, ಗೋವಾ ಪ್ರವೇಶಕ್ಕಾಗಿ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕೆಂದು ಪ್ರವಾಸೋದ್ಯಮ ನಿರ್ದೇಶಕರಿಗೆ ಪ್ರಮೋದ್ ಸಾವಂತ್ ಸೂಚಿಸಿದ್ದಾರೆ.

Join Whatsapp