ಗೋಧ್ರಾದಂತಹ ಘಟನೆ ಮತ್ತೆ ಸಂಭವಿಸುವ ಸಾಧ್ಯತೆ ಇದೆ: ಉದ್ಧವ್ ಠಾಕ್ರೆ ಎಚ್ಚರಿಕೆ

Prasthutha|

ಮುಂಬೈ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಲಕ್ಷಾಂತರ ಜನರು ಹಿಂತಿರುಗುವ ಸಮಯದಲ್ಲಿ ಗೋಧ್ರಾದಂತಹ ಘಟನೆ ಉದ್ಭವಿಸಬಹುದು ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

- Advertisement -


ಈ ಬಗ್ಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಕೆಲವು ತಿಂಗಳ ಮೊದಲು, 2024ರ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಯಾಗುವ ಸಾಧ್ಯತೆ ಇದೆ. ಈ ಬಾರಿ ರಾಮಮಂದಿರ ಉದ್ಘಾಟನೆಯ ಕಾರ್ಯಕ್ರಮ ವೀಕ್ಷಿಸಲು ಕೇಂದ್ರ ಸರ್ಕಾರ ಬಸ್ ಗಳು ಹಾಗೂ ಟ್ರಕ್ ಗಳಲ್ಲಿ ಲಕ್ಷಾಂತರ ಮಂದಿಯನ್ನು ಆಹ್ವಾನಿಸುವ ಸಾಧ್ಯತೆ ಇದೆ. ಅವರೆಲ್ಲರೂ ತಮ್ಮ ತಮ್ಮ ಊರಿಗೆ ವಾಪಸ್ ಆಗುವ ಸಂದರ್ಭದಲ್ಲಿ ಗೋಧ್ರಾ ಮಾದರಿ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

Join Whatsapp