Home ಟಾಪ್ ಸುದ್ದಿಗಳು ಗೌರಿ ಲಂಕೇಶ್ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ ಸಿಂಹ; ಗೋಡ್ಸೆ ಆರಾಧಕರಾದ ಬಿಜೆಪಿಯವರ ಅಸಲಿ ಮುಖ:...

ಗೌರಿ ಲಂಕೇಶ್ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ ಸಿಂಹ; ಗೋಡ್ಸೆ ಆರಾಧಕರಾದ ಬಿಜೆಪಿಯವರ ಅಸಲಿ ಮುಖ: ಗುಂಡೂರಾವ್

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದಾರೆ. ಸದ್ಯ ಈ ವಿಚಾರ ರಾಜಕೀಯ ವಲಯ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.


ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಮದ್ದೂರಿನ ನವೀನ್ ಕುಮಾರ್ ತನ್ನ ಗೆಳೆಯ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿಕೊಂಡಿದ್ದಾರೆ. ಇದು ಗೋಡ್ಸೆ ಆರಾಧಕರ (ಬಿಜೆಪಿಯವರ) ಅಸಲಿ ಮುಖವಾಗಿದೆ. ಸಮಾಜದ ಶಾಂತಿ ಕದಡುವ, ಕೊಲೆ, ಸುಲಿಗೆಯಂತಹ ವಿದ್ವಂಸಕ ಕೃತ್ಯ ನಡೆಸುವವರೆಲ್ಲಾ ಬಿಜೆಪಿಯ ಗರ್ಭಗುಡಿಯಲ್ಲೇ ಇರುತ್ತಾರೆ ಎಂಬುವುದಕ್ಕೆ ಇದೊಂದು ನಿದರ್ಶನ’ ಎಂದು ವಾಗ್ದಾಳಿ ನಡೆಸಿದ್ದಾರೆ.


‘ದಿಟ್ಟ ಪತ್ರಕರ್ತೆಯಾಗಿದ್ದ ಗೌರಿ ಲಂಕೇಶ್ ಅವರನ್ನು ಕೊಲೆಗೈದ ಆರೋಪಿಯ ಕೃತ್ಯವನ್ನು ಬಿಜೆಪಿಯ ಮಾಜಿ ಸಂಸದ ಪ್ರತಾಪ ಸಿಂಹ ಖಂಡಿಸುವ ಬದಲು, ಆ ಆರೋಪಿಯ ಹೆಗಲ ಮೇಲೆ ಕೈ ಹಾಕಿ ಫೋಟೊ ತೆಗೆಸಿಕೊಂಡರೆ ಸಮಾಜಕ್ಕೆ ಯಾವ ಸಂದೇಶ ಹೋಗುತ್ತದೆ’ ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.

Join Whatsapp
Exit mobile version