Home ಟಾಪ್ ಸುದ್ದಿಗಳು ಪೊಲೀಸ್ ಸೋಗಿನಲ್ಲಿ 1 ಕೋಟಿ ಮೌಲ್ಯದ ಚಿನ್ನದ ಗಟ್ಟಿ ದೋಚಿದ ಖದೀಮರು

ಪೊಲೀಸ್ ಸೋಗಿನಲ್ಲಿ 1 ಕೋಟಿ ಮೌಲ್ಯದ ಚಿನ್ನದ ಗಟ್ಟಿ ದೋಚಿದ ಖದೀಮರು

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ಬೆದರಿಸಿದ ದುಷ್ಕರ್ಮಿಗಳು 1 ಕೋಟಿ 12 ಲಕ್ಷ ರೂ ಮೌಲ್ಯದ ಚಿನ್ನದ ಗಟ್ಟಿ ಕಸಿದುಕೊಂಡು ಪರಾರಿಯಾಗಿರುವ ಘಟನೆ ಮೆಜೆಸ್ಟಿಕ್ ಸಮೀಪದ ಆನಂದ ರಾವ್ ಸರ್ಕಲ್ ಬಳಿ ನಡೆದಿದೆ

ಮೂರು ದಿನಗಳ ಹಿಂದೆ ನಗರದ ಮೆಜೆಸ್ಟಿಕ್ ಸಮೀಪದ ಆನಂದ ರಾವ್ ಸರ್ಕಲ್ ಬಳಿ ನಡೆದ ಚಿನ್ನದಗಟ್ಟಿ ಕಳ್ಳತನ ತಡವಾಗಿ ಬೆಳಕಿಗೆ ಬಂದಿದ್ದು ಕೃತ್ಯ ನಡೆಸಿದವರ ಪತ್ತೆಗೆ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ರಾಯಚೂರಿನಿಂದ ಚಿನ್ನ ಖರೀದಿಗೆ ಬಂದಿದ್ದ ಅಬ್ದುಲ್ ರಜಾಕ್ ಮತ್ತು ಮಲ್ಲಯ್ಯ ಎಂಬವರನ್ನು ಪೊಲೀಸರೆಂದು ಪರಿಚಯಿಸಿಕೊಂಡ ಇಬ್ಬರು ಅಪರಿಚಿತರು ಚಿನ್ನದ ಗಟ್ಟಿ ಪಡೆದುಕೊಂಡು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಬರುವಂತೆ ತಿಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ರಾಯಚೂರಿನ ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಬ್ದುಲ್ ರಜಾಕ್ ಹಾಗೂ ಮಲ್ಲಯ್ಯ, ಅಂಗಡಿ ಮಾಲೀಕರ ಸೂಚನೆಯಂತೆ ಬೆಂಗಳೂರಿಗೆ ಬಂದು ಚಿನ್ನ ಖರೀದಿಸಿದ್ದರು. ವಾಪಸ್ ರಾಯಚೂರಿಗೆ ತೆರಳಲು ಬಸ್ ನಿಲ್ದಾಣದ ಬಳಿ ಕಾಯುತ್ತಿದ್ದಾಗ ಅಲ್ಲಿಗೆ ಬಂದ ಆರೋಪಿಗಳು ಕೃತ್ಯ ಎಸಗಿದ್ದಾರೆ.

ಅಸಲಿ ಪೊಲೀಸರೇ ಇರಬಹುದು ಎಂದು ನಂಬಿದ ಇಬ್ಬರು ಠಾಣೆ ಬಳಿ‌ ಬಂದು ವಿಚಾರಿಸಿದಾಗ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

Join Whatsapp
Exit mobile version