ಬೆಂಗಳೂರು: ಬುಧವಾರ ಆಭರಣ ಚಿನ್ನದ ಬೆಲೆ ಗ್ರಾಮ್ ಗೆ 275 ರೂನಷ್ಟು ಕಡಿಮೆ ಆಗಿದೆ. ಅಪರಂಜಿ ಚಿನ್ನದ ಬೆಲೆ 300 ರೂ ತಗ್ಗಿದೆ. 9,290 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 9,015 ರೂಗೆ ಇಳಿದಿದೆ.
ಅಪರಂಜಿ ಚಿನ್ನವೂ ಕೂಡ 10,000 ಗಡಿಯೊಳಗೆ ಇಳಿದಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಅಲ್ಪ ಏರಿಕೆಯಷ್ಟೇ ಕಂಡಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಮುಂದುವರಿದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 90,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 98,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 90,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,100 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 23ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 98,350 ರೂ
18 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 73,760 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 1,01,350 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ