ಮಂಗಳೂರು: ದುಬೈಯಿಂದ ಆಗಮಿಸಿದ ವ್ಯಕ್ತಿಯೋರ್ವ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ವ್ಯಕ್ತಿಯಿಂದ 706 ಗ್ರಾಂ ತೂಕದ ಬಂಗಾರವನ್ನು ಪತ್ತೆ ಹಚ್ಚಲಾಗಿದ್ದು, ಇದರ ಮೌಲ್ಯವು ಸುಮಾರು ರೂ. 36.50 ಲಕ್ಷಕ್ಕೂ ಅಧಿಕವಾಗಿದೆ ಎಂದು ಅಂದಾಜಿಸಲಾಗಿದೆ.
ಆರೋಪಿಯು ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಅದನ್ನು ಅಂಡಾಕೃತಿಯಲ್ಲಿರುವ ಕವರ್ ವೊಂದರಲ್ಲಿ ಸುತ್ತಿ ಸಾಗಿಸಲು ಯತ್ನಿಸಿದ್ದಾಗಿ ತಿಳಿದು ಬಂದಿದೆ.