Home ಟಾಪ್ ಸುದ್ದಿಗಳು ಚಿನ್ನ, ಬೆಳ್ಳಿ ಬೆಲೆ ಏರಿಕೆ: ಇಲ್ಲಿದೆ ಇವತ್ತಿನ ದರಪಟ್ಟಿ

ಚಿನ್ನ, ಬೆಳ್ಳಿ ಬೆಲೆ ಏರಿಕೆ: ಇಲ್ಲಿದೆ ಇವತ್ತಿನ ದರಪಟ್ಟಿ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 8,000 ರೂ ಗಡಿ ದಾಟಿ ಹೋಗಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 6,000 ರೂ ಗಡಿ ದಾಟಿದೆ. 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಗ್ರಾಮ್ ಗೆ 10 ರೂ ಏರಿಕೆ ಆಗಿದೆ. 7,330 ರೂ ಇದ್ದ ಅದರ ಬೆಲೆ ಇಂದು ಬುಧವಾರ 7,340 ರೂಗೆ ಏರಿದೆ. ಬೆಳ್ಳಿ ಬೆಲೆ ಗ್ರಾಮ್ ಗೆ ಒಂದು ರೂ.ನಷ್ಟು ಹೆಚ್ಚಳವಾಗಿದೆ.

92.50 ರೂ ಮತ್ತು 100 ರೂ ಇದ್ದ ಬೆಳ್ಳಿ ಬೆಲೆ 93.50 ರೂ ಮತ್ತು 101 ರೂಗೆ ಏರಿಕೆ ಆಗಿದೆ. ವಿದೇಶಗಳ ಮಾರುಕಟ್ಟೆಗಳಲ್ಲಿ ಕೆಲವೆಡೆ ಮಾತ್ರ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 73,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 80,070 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 73,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,350 ರುಪಾಯಿಯಲ್ಲಿ ಇದೆ.


ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 15ಕ್ಕೆ)
• 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 73,400 ರೂ
• 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 80,070 ರೂ
• 18 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 60,060 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ


ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
• 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 73,400 ರೂ
• 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 80,070 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ

Join Whatsapp
Exit mobile version