ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ದಾಖಲೆ ಬರೆದಿದೆ. ಅಪರಂಜಿ ಚಿನ್ನದ ಬೆಲೆ 9,000 ರೂ ಗಡಿ ಮುಟ್ಟಿದೆ. ಆಭರಣ ಚಿನ್ನದ ಬೆಲೆ 8,250 ರೂಗೆ ಏರಿದೆ.
ಭಾರತದಲ್ಲಿ ಮಾತ್ರವಲ್ಲ ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ನಿನ್ನೆ ಸ್ವಲ್ಪ ಮಟ್ಟಿಗೆ ಇಳಿದಿದ್ದು, ತಾತ್ಕಾಲಿಕ ವಿರಾಮ ಮಾತ್ರವೇ. ಈ ಹಳದಿ ಲೋಹದ ಬೆಲೆ ಮತ್ತೆ ಏರುಗತಿಗೆ ಬಂದಿದೆ.
ಬೆಳ್ಳಿ ಬೆಲೆಯೂ ದಾಖಲೆ ಮೀರಿ ಹೋಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಮೊದಲ ಬಾರಿಗೆ 104 ರೂ ಗಡಿ ಮುಟ್ಟಿದೆ. ಚೆನ್ನೈ ಮೊದಲಾದ ಕಡೆ ಇದರ ಬೆಲೆ 113 ರೂ ಆಗಿಹೋಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ ನ 22 ಕ್ಯಾರಟ್ ಚಿನ್ನದ ಬೆಲೆ 82,500 ರುಪಾಯಿ ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 90,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 82,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,400 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 18ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,500 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 90,000 ರೂ
18 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 67,500 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,040 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 82,500 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 90,000 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,040 ರೂ