ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮುನಿಯಾಲು ಉದಯ ಶೆಟ್ಟಿ !

Prasthutha|

ಉಡುಪಿ: ಖ್ಯಾತ ಸಾಮಾಜಿಕ ಹೋರಾಟಗಾರ, ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷವನ್ನು ತೊರೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ.

- Advertisement -

ಕಾಂಗ್ರೆಸ್ ನಲ್ಲಿ ಪಕ್ಷ ಸಂಘಟನೆಗೆ ಕ್ರಿಯಾಶೀಲವಾಗಿ ಒತ್ತು ನೀಡದಿರುವ ಹಿನ್ನೆಲೆಯಲ್ಲಿ ಉದಯ್ ಶೆಟ್ಟಿ ಅವರು ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಈ ಹಿಂದೆ ಉಡುಪಿ ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷ ಹುದ್ದೆಯನ್ನಲಂಕರಿಸಿದ್ದ ಉದಯ್, ಪಕ್ಷದ ಚಟುವಟಿಕೆಗೆ ಬೇಸತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಕಾಂಗ್ರೆಸ್, ಪಕ್ಷವನ್ನು ಜಿಲ್ಲೆಯಲ್ಲಿ ಸಮರ್ಥವಾಗಿ ಬೆಳೆಸುವಲ್ಲಿ ಉನ್ನತ ನಾಯಕರು ಆಸಕ್ತಿ ತೋರದ ಹಿನ್ನೆಲೆಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿವೆ.

- Advertisement -

ಕಾರ್ಕಳದಾದ್ಯಂತ ಸಮಾಜ ಸೇವೆ, ಧಾರ್ಮಿಕ ವಿಚಾರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಉದಯ್ ಕುಮಾರ್ ಶೆಟ್ಟಿ, ಹೆಬ್ರಿಯ ಸಾವಿರಾರು ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಿದ್ದರು. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು.

Join Whatsapp