ಪ್ರಧಾನಿ ಮೋದಿ ಪ್ರಾಯಶ್ಚಿತ್ತಕ್ಕಾಗಿ ಕನ್ಯಾಕುಮಾರಿಗೆ ಹೋಗುವುದು ಒಳ್ಳೆಯದು: ಕಪಿಲ್ ಸಿಬಲ್

Prasthutha|

ಚಂಡೀಗಢ: ಪ್ರಧಾನಿ ಮೋದಿ ಅವರು ಪ್ರಾಯಶ್ಚಿತ್ತಕ್ಕಾಗಿ ಕನ್ಯಾಕುಮಾರಿಗೆ ಹೋಗುವುದು ಒಳ್ಳೆಯದು. ಸ್ವಾಮಿ ವಿವೇಕಾನಂದರ ಬರಹಗಳು ಮತ್ತು ಭಾಷಣಗಳಿಂದ ಸ್ಫೂರ್ತಿ ಪಡೆಯಲು ಹೊರಟರೂ ಒಳ್ಳೆಯದು. ಆದರೆ ವಿವೇಕದ ಬಗ್ಗೆ ಅರ್ಥ ಗೊತ್ತಿಲ್ಲದ ಅವರು ಏನು ಧ್ಯಾನ ಮಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

- Advertisement -

ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಸ್ಮಾರಕದಲ್ಲಿ ಎರಡು ದಿನಗಳ ವಾಸ್ತವ್ಯ ಹೂಡುವುದರ ಜತೆಗೆ ಧ್ಯಾನ ಕೂರಲಿದ್ದಾರೆ ಎಂದು ಸುದ್ದಿಯಾಗಿದ್ದರ ಬಗ್ಗೆ ಕಪಿಲ್ ಸಿಬಲ್ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಸಾಧನೆಗಳ ಬಗ್ಗೆ ಮಾತನಾಡುವುದಿಲ್ಲ. ಕಳೆದ 10 ವರ್ಷಗಳಿಂದ ಮೋದಿ ಏನು ಮಾಡಿದ್ದಾರೆ? ಏನು ಮಾಡಿದ್ದಾರೆಂದು ಪ್ರಧಾನಿ ತಮ್ಮ ಭಾಷಣಗಳಲ್ಲಿ ಹೇಳಿದ್ದಾರೆ? ಅವರ ಸಾಧನೆಗಳೇನು? ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಅವರು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಸಿಬಲ್ ಹೇಳಿದ್ದಾರೆ.

- Advertisement -

ಅಧಿಕಾರಕ್ಕೆ ಬರುವ ಮೊದಲು ಪ್ರಧಾನಿ ಮೋದಿ ದೊಡ್ಡ ದೊಡ್ಡ ಭಾಷಣಗಳನ್ನು ಮಾಡುತ್ತಿದ್ದರು. ಅಧಿಕಾರಕ್ಕೆ ಬಂದ ನಂತರ ‘ನವ ಭಾರತ’ ನಿರ್ಮಾಣ ಮಾಡುವುದಾಗಿ ಹೇಳಿಕೊಂಡಿದ್ದರು. ಆದರೆ, ಮೋದಿ ಅಧಿಕಾರಕ್ಕೆ ಬಂದು 10 ವರ್ಷದಲ್ಲಿ ಯಾವ ‘ನವ ಭಾರತ’ ನಿರ್ಮಾಣ ಮಾಡಿದ್ದಾರೆ ಎಂದು ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

Join Whatsapp