ಬೆಂಗಳೂರು: ಜಾಗತಿಕ ಟ್ಯಾರಿಫ್ ಯುದ್ಧದ ಮಧ್ಯೆ ಚಿನ್ನದ ಬೆಲೆ ಸತತ ಇಳಿಕೆ ಮುಂದುವರಿದಿದೆ. ನಿನ್ನೆ 25 ರೂನಷ್ಟು ಕಡಿಮೆ ಆಗಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 60 ರೂ ಕುಸಿದಿದೆ.
22 ಕ್ಯಾರಟ್ ಚಿನ್ನದ ಬೆಲೆ 8,285 ರೂ ಇದ್ದದ್ದು 8,225 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 9,000 ರೂ ಒಳಗೆ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ ನ 22 ಕ್ಯಾರಟ್ ಚಿನ್ನದ ಬೆಲೆ 82,250 ರುಪಾಯಿ ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 89,730 ರುಪಾಯಿ ಆಗಿದೆ.
100 ಗ್ರಾಮ್ ಬೆಳ್ಳಿ ಬೆಲೆ 9,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ ಗೆ 82,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ ಗೆ 9,400 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 8ಕ್ಕೆ)
22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 82,250 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 89,730 ರೂ
18 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 82,250 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 89,730 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ