HSRP ಅಳವಡಿಸದವರಿಗೆ ಗುಡ್ ನ್ಯೂಸ್: ಗಡುವು ವಿಸ್ತರಣೆಗೆ ಹೈಕೋರ್ಟ್ ಅನುಮತಿ

Prasthutha|

ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ(HSRP) ಅಳವಡಿಕೆಗೆ ನಿಗದಿಪಡಿಸಿದ ಗಡುವು ವಿಸ್ತರಣೆಗೆ ಹೈಕೋರ್ಟ್ ಅನುಮತಿ ನೀಡಿದೆ. HSRP ಅಳವಡಿಕೆ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮ ಹಾಗೂ ನಿರ್ಧಾರವನ್ನು ಜುಲೈ 4ರ ವರೆಗೆ ಜರುಗಿಸಬಾರದು ಎಂದೂ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

- Advertisement -

HSRP ಅಳವಡಿಕೆಗೆ ವಿಧಿಸಲಾದ ಗಡುವು ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಬಿ.ಎನ್.ಡಿ. ಎನರ್ಜಿ ಲಿಮಿಟೆಡ್ ಮೊದಲಾದವರು ಸಲ್ಲಿಸಿದ ಮೇಲ್ಮನವಿಗಳ ವಿಚಾರಣೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದ್ದು, ಸರ್ಕಾರಕ್ಕೆ ಈ ಕುರಿತಾಗಿ ಸೂಚನೆ ನೀಡಲಾಗಿದೆ.

ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಂ ಹುಯಿಲಗೋಳ, HSRP ಅಳವಡಿಕೆಗೆ ಆಗಸ್ಟ್ ಅಥವಾ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಿಸಲು ಸರ್ಕಾರ ನಿರ್ಧರಿಸಿದ್ದು, ನ್ಯಾಯಪೀಠ ಅನುಮತಿ ನೀಡಿದಲ್ಲಿ ಗಡುವು ವಿಸ್ತರಿಸಲಾಗುವುದು ಎಂದು ಕೋರ್ಟಿಗೆ ತಿಳಿಸಿದ್ದರು. ಗಡುವು ವಿಸ್ತರಿಸಲು ಹೈಕೋರ್ಟ್ ಅನುಮತಿ ನೀಡಿದ್ದು, ಜುಲೈ 4ರ ವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Join Whatsapp