Home ಮಾಹಿತಿ ಗುಡ್ ನ್ಯೂಸ್: 5267 ಶಿಕ್ಷಕರ ನೇಮಕಾತಿಗೆ ಆದೇಶ ಪ್ರಕಟ

ಗುಡ್ ನ್ಯೂಸ್: 5267 ಶಿಕ್ಷಕರ ನೇಮಕಾತಿಗೆ ಆದೇಶ ಪ್ರಕಟ

ಯಾವ ಹುದ್ದೆಗೆ ಏನು ವಿದ್ಯಾರ್ಹತೆ?

ಕರ್ನಾಟಕ ಸರ್ಕಾರವು 2024-25ನೇ ಸಾಲಿನ ಆಯವ್ಯಯ ಭಾಷಣದ ಘೋಷಣೆಯಂತೆ, ಸರ್ಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ಇದೀಗ ನೀಡಿದೆ. ಬರೋಬರಿ 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ.


2024-25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ಪೈಕಿ ಶೇಕಡ.80 ರಷ್ಟು ಅಂದರೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಹುದ್ದೆಗಳ ವಿವರಗಳೊಂದಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಇವರು ಸದರಿ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಿದ್ದರು. ಇದೀಗ ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ಹುದ್ದೆಗಳ ಭರ್ತಿಗೆ ಅನುಮತಿ ನೀಡಿ ಆದೇಶಿಸಿದೆ.


ಯಾವ ಹುದ್ದೆಗೆ ಏನು ವಿದ್ಯಾರ್ಹತೆ?
ಪ್ರಾಥಮಿಕ ಶಾಲಾ ಶಿಕ್ಷಕರು (1-5ನೇ ತರಗತಿವರೆಗೆ) : ಡಿ.ಇಡಿ ಶಿಕ್ಷಣ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (6-8ನೇ ತರಗತಿ): ಪದವಿ ಜತೆಗೆ ಬಿ.ಇಡಿ ಶಿಕ್ಷಣ.
ಫಿಸಿಕಲ್ ಎಜುಕೇಷನ್ ಟೀಚರ್ (ಗ್ರೇಡ್-2) : ಪದವಿ ಜತೆಗೆ ಬಿಪಿ.ಇಡಿ ಶಿಕ್ಷಣ.

ಪ್ರಸ್ತುತ ನೇಮಕಾತಿಗೆ ಆದೇಶ ನೀಡಿದ್ದು, ಇದರ ಕುರಿತು ಮುಂದಿನ ದಿನಗಳಲ್ಲಿ ಕರಡು ಅಧಿಸೂಚನೆ ಪ್ರಕಟವಾಗಲಿದ್ದು, ಅದಕ್ಕೆ ಸಲ್ಲಿಕೆ ಆಗುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರದಲ್ಲಿ ಅಂತಿಮ ಅಧಿಸೂಚನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

Join Whatsapp
Exit mobile version